ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಿಟ್ಟು ಮರಳಿ ಜೆಡಿಎಸ್ಗೆ
ಬೀದರ್: ಇದೀಗ ಬಿಜೆಪಿನ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ್ದಾರೆ.
ಜೆಡಿಎಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಿಟ್ಟು ಮರಳಿ ಗೂಡಿಗೆ ಸೇರಿದ್ದಾರೆ.
ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ಗಾಳಿ ಬೀಸುತ್ತಿದ್ದು ಕಾಂಗ್ರೆಸ್ ಪಕ್ಷದಿಂದ ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಪ್ರಬಲ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇತ್ತ ಬಿಜೆಪಿಯಿಂದ ಹಾಲಿ ಶಾಸಕ ಶರಣು ಸಲಗಾರ ಸ್ಪರ್ಧಿಸಬಹುದು. ಅದಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಇಬ್ಬರು ನೆರೆಯ ಕಲಬುರ್ಗಿ ಜಿಲ್ಲೆಯವರಾಗಿದ್ದಾರೆ. ಹೀಗಾಗಿ ಸ್ಥಳೀಯರಾಗಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧೆ ನಾನಾ ಲೆಕ್ಕಾಚಾರ ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಸೇರಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಸವಕಲ್ಯಾಣ ಕ್ಷೇತ್ರದಿಂದ ಮಲ್ಲಿಕಾರ್ಜುನ ಖೂಬಾ ಸ್ಪರ್ಧೆ ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ನಿಂದ ಎರಡನೇ ಇನಿಂಗ್ಸ್ ಶುರು ಮಾಡಿದ್ದಾರೆ.