ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವು : ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವು : ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸೋದರನ ಮಗನ ಅನುಮಾನಾಸ್ಪದ ಸಾವನ್ನಪ್ಪಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಟ್ವೀಟರ್ ನಲ್ಲಿ ರೇಣುಕಾಚಾರ್ಯ ಸೋದರ ಮನಗ ಸಾವಿಗೆ ಸಂತಾಪ ಸೂಚಿಸಿದ್ದು,ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.