ಶಾಸಕ ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಶಾಸಕ ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು : ಹಿಂದೂ ಪದದ ಕುರಿತು ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ಹಿಂದುಗಳಿಗೆ ಅಪಮಾನ ಮಾಡಿದ್ದಾರೆ. ಸತೀಶ್ ಜಾರಕಿಹೊಳಿ ಕ್ಷಮಾಪಣೆಗೆ ಒತ್ತಾಯ ಮಾಡುತ್ತೇನೆ. ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದಿದ್ದಾರೆ.

ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಗರದ ಮೈಸೂರು ಬ್ಯಾಂಕ್‌ ಸರ್ಕಲ್‌ ನಲ್ಲಿ ಬಿಜೆಪಿ ಯುವ ಮೋರ್ಚಾ ದಿಂದ ಪ್ರತಿಭಟನೆ ನಡೆಸಲಿದ್ದಾರೆ.ಸತೀಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದೇನು?
ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ.
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ. ಹಿಂದೂ ಪದದ ಅರ್ಥವನ್ನು ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ. ಇದು ಅಸಭ್ಯವಾಗಿದೆ ಎಂದು ಜಾರಕಿಹೊಳಿ ಹೇಳುತ್ತಿರುವುದು ವಿಡಿಯೊದಲ್ಲಿದೆ. ಈ ಪದ ಎಲ್ಲಿಂದ ಬಂದಿದೆಯೆಂದು ತಿಳಿಯಲು ವಿಕಿಪೀಡಿಯಾ ಚೆಕ್ ಮಾಡಿ ಎಂದು ಅವರು ಹೇಳಿದ್ದಾರೆ.