ಶಾಸಕ ಸುರೇಶ್ ಕುಮಾರ್ ಫೇಸ್ ಬುಕ್ ಅಕೌಂಟ್ ಹ್ಯಾಕ್; ಹಣ ಕೇಳಿದ ಕಿಡಿಗೇಡಿಗಳು
ಬೆಂಗಳೂರು: ಶಾಸಕ ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ. ಈ ವೇಳೆ ಫೇಸ್ ಬುಕ್ ನಲ್ಲಿ ಹಣ ಕೇಳುತ್ತಿದ್ದಾರೆ.ಈ ಸಂಬಂಧ ಸ್ವತಃ ಸಚಿವರೇ ತನ್ನ ಫೇಸ್‍ಬುಕ್ ಖಾತೆಯಲ್ಲಿ ಸ್ಕ್ರೀನ್ ಶಾಟ್ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ನಕಲಿ ಫೇಸ್ ಬುಕ್ ಅಕೌಂಟ್ ತೆಗೆದಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ದಯವಿಟ್ಟು ನನ್ನ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ ತಾವ್ಯಾರೂ ಸ್ಪಂದಿಸಬಾರದೆಂದು ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.