ಶಾಸಕರಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ : ಬೆಳಗಾವಿ ಅಧಿವೇಶನದಲ್ಲಿ ಶಾಸಕರ ಆಪ್ತ ಸಹಾಯಕ, ಚಾಲಕರಿಗೆ ಊಟ ಇಲ್ಲ

ಶಾಸಕರಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ : ಬೆಳಗಾವಿ ಅಧಿವೇಶನದಲ್ಲಿ ಶಾಸಕರ ಆಪ್ತ ಸಹಾಯಕ, ಚಾಲಕರಿಗೆ ಊಟ ಇಲ್ಲ

ಬೆಳಗಾವಿ : ಬೆಳಗಾವಿಯಲ್ಲಿ ಡಿಸೆಂಬರ್ 13 ರಿಂದ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರು ರಾತ್ರಿ ಊಟದ ವ್ಯವಸ್ಥೆಯನ್ನು ಅವರೇ ಮಾಡಿಕೊಳ್ಳಬೇಕು ಎಂದು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮಾಹಿತಿ

ಬೆಳಗಾವಿ ಅಧಿವೇಶನದ ಅವಧಿಯಲ್ಲಿ ಬೆಳಗಿನ ಉಪಹಾರವನ್ನು ವಾಸ್ತವ್ಯ ಹೂಡಿರುವ ಹೋಟೆಲ್, ಸುವರ್ಣಸೌಧದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ಊಟದ ವ್ಯವಸ್ಥೆಯನ್ನು ಈ ಹಿಂದಿನಂತೆ ತಮ್ಮ ಹಂತದಲ್ಲಿಯೇ ಮಾಡಿಕೊಳ್ಳಬೇಕು ಎಂಬ ಮಾಹಿತಿ ನೀಡಲಾಗಿದೆ.

ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರ ಆಪ್ತ ಸಹಾಯಕರು, ವಾಹನ ಚಾಲಕರಿಗೆ ವಸತಿ ಹಾಗೂ ಸಾರಿಗೆ ಸೌಕರ್ಯದ ಜವಾಬ್ದಾರಿಯನ್ನು ಆಯಾ ಶಾಸಕರಿಗೆ ನೀಡಲಾಗಿದೆ. ಸಚಿವಾಲಯದ ಅಧಿಕಾರಿಗಳ ತಂಡ ಬೆಳಗಾವಿಗೆ ಸ್ಥಳಾಂತರವಾಗಿದ್ದು, ಪೂರ್ವ ಸಿದ್ಧತೆಗಳನ್ನು ಪಾರಂಭಿಸಲಾಗಿದೆ.