ಶಿಕಾರಿಪುರಕ್ಕೆ ವಿಜಯೇಂದ್ರ ಅಭ್ಯರ್ಥಿ: ಯಡಿಯೂರಪ್ಪ

ಶಿಕಾರಿಪುರಕ್ಕೆ ವಿಜಯೇಂದ್ರ ಅಭ್ಯರ್ಥಿ: ಯಡಿಯೂರಪ್ಪ

ಬೆಂಗಳೂರು: ಚುನಾವಣ ರಾಜಕಾರಣದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ತಮ್ಮ ಕಾರ್ಯಕ್ಷೇತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ಬಿ.ವೈ.

ವಿಧಾನಸಭೆ ಕಲಾಪದ ಬಳಿಕ ಅಂಬೇಡ್ಕರ್‌ ಪ್ರತಿಮೆ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ವಿಧಾನಸೌಧದಿಂದ ನಡೆದುಕೊಂಡೇ ಬಂದು ಗಾಂಧಿ ಪ್ರತಿಮೆಗೆ ಅವರು ನಮನ ಸಲ್ಲಿಸಿದರು. ಶಿಕಾರಿಪುರಕ್ಕೆ ಬಹುತೇಕ ವಿಜಯೇಂದ್ರ ಅವರೇ ಮುಂದಿನ ಚುನಾವಣೆಯ ಅಭ್ಯರ್ಥಿ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ನಮ್ಮ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡುತ್ತಾರೆ ಎಂದು ಹೇಳಿದರು.

ಇದೇ ತಿಂಗಳು 27ರಂದು ನನ್ನ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಶಿವಮೊಗ್ಗಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು