ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ. ಆಯ್ಕೆಯಲ್ಲಿ ಮೀಸಲಾತಿ ಸಂಬಂಧ ಹಲವು ಅಭ್ಯರ್ಥಿಗಳು ಒಬಿಸಿ ಮೀಸಲಾತಿಯಲ್ಲಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.