ಶಿಕ್ಷಕಿಯರ ಜತೆ ಅನುಚಿತ ವರ್ತನೆ ತೋರಿದ ಶಿಕ್ಷಕನ ವರ್ಗಾವಣೆಗೆ ಆಗ್ರಹ: ಆರೋಪ ಅಲ್ಲಗಳೆದ ಶಿಕ್ಷಕ
ದಾವಣಗೆರೆ: ಶಿಕ್ಷಕಿಯರ ಜೊತೆಗೆ ಸರ್ಕಾರಿ ಶಾಲೆ ಶಿಕ್ಷಕ ಅನುಚಿತ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರ್ ಅಲಿ ಖಾನ್ ವರ್ಗಾವಣೆಗೆ ಡಿಡಿಪಿಐ ಭರವಸೆ ನೀಡಿದ ಹಿನ್ನೆಲೆಯಲ್ಲಿ ದೊಡ್ಡಘಟ್ಟ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಅಜ್ಗರ್ ಅಲಿ ಖಾನ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಬಿಇಒ ಅವರಿಂದ ವರದಿ ಪಡೆದು ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಡಿಡಿಪಿಐ ಭರವಸೆ ನೀಡಿದ್ದಾರೆ.
ಶಾಲೆ ಜಾಗ ಕಬಳಿಕೆ ಹೋರಾಟ ಹಿನ್ನೆಲೆ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಶಿಕ್ಷಕ ಅಜ್ಗರ್ ಅಲಿ ಖಾನ್ ದೂರಿದ್ದಾರೆ.
20 ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಗ್ರಾಮ ಪಂಚಾಯಿತಿಗೆ ಹೋಗಿ ಶಾಲೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೆ. ಹೀಗಾಗಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಯಾರಿಗೂ ತೊಂದರೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.