ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ ಚುನಾವಣೆ

ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ ಚುನಾವಣೆ ನಿಮಿತ್ಯ ಧಾರವಾಡದ ಜೆ ಎಸ ಎಸ ಮಹಾವಿದ್ಯಾಲಯದಲ್ಲಿ ಇಂದು ರಾಜ್ಯ ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವರು ಶ್ರೀ ಬಿ ಸಿ ನಾಗೇಶ ಅವರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಪರ ಮತ ಯಾಚಿಸಿದರು.
ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ ಚುನಾವಣೆ ದಿನೆ ದಿನೆ ರಂಗೇರುತ್ತಿದೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಪರ ಮತ ಯಾಚಿಸಲು ಕಮಲ ಪಾಳೆಯ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಿಟ್ಟಿನಲ್ಲಿ ಖುದ್ದು ಶಿಕ್ಷಣ ಸಚಿವ ಬಿ. ಸಿ. ನಾಗೇಶ ಆಖಾಡಕ್ಕೆ ಇಳಿದಿದ್ದಾರೆ. ಇವರಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರು ಈರೇಶ ಅಂಚಟಗೇರಿ ಬಿಜೆಪಿ ಜಿಲ್ಲಾಧ್ಯಕ್ಷರು ಸಂಜಯ ಕಪಟಕರ ಐಟಿಐ ಸಾಥ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯಾಯ, ಸಾಧನಾ ಹಾಗೂ ಜೆ ಎಸ ಎಸ ಶಿಕ್ಷಣ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು
9 ಲೈವ್ ನ್ಯೂಸ್ ಧಾರವಾಡ