ಶಿಕ್ಷೆ ಪ್ರಮಾಣ ಕಡಿತಕ್ಕೆ ಪೋಕ್ಸೋ ನ್ಯಾಯಾಲಯಕ್ಕೆ ಅಧಿಕಾರವಿಲ್ಲ - ಹೈಕೋರ್ಟ್ ಮಹತ್ವದ ಆದೇಶ

ಶಿಕ್ಷೆ ಪ್ರಮಾಣ ಕಡಿತಕ್ಕೆ ಪೋಕ್ಸೋ ನ್ಯಾಯಾಲಯಕ್ಕೆ ಅಧಿಕಾರವಿಲ್ಲ - ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪೋಕ್ಸೋ ಕಾಯ್ದೆಯ ಅಡಿಯಲ್ಲಿ ನಿಗದಿಯಾಗುವಂತ ಶಿಕ್ಷೆಯ ಪ್ರಮಾಣ ಕಡಿತಕ್ಕೆ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಈ ಸಂಬಂಧ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಾಲವಾಡಿಯ ನಿವಾಸಿ ಶೇಖ್ ರೌಫ್ ಎಂಬಾತನಿಗೆ ನೀಡಲಾಗಿದ್ದಂತ ಶಿಕ್ಷೆಯ ಪ್ರಮಾಣ ಕಡಿತದ ಬಗ್ಗೆ, ಸರ್ಕಾರ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು.

ಈ ಅರ್ಜಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನಯ್ವೆಸಗಿದ ಆರೋಪಿ ಶೇಖ್ ರೌಫ್ ದೋಷಿ ಎಂದು ತೀರ್ಮಾನಿಸಿದ್ದರೂ 7 ವರ್ಷದ ಬದಲಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಪೋಕ್ಸೋ ವಿಶೇಷ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ಧ ನ್ಯಾಯಪೀಠವು, ಶೇಖ್ ರೌಫ್ ಅನ್ನು ದೋಷಿ ಎಂದು ತೀರ್ಮಾನಿಸಿದ ಪೋಕ್ಸೋ ವಿಶೋಷ ನ್ಯಾಯಲಯದ ಆದೇಶವನ್ನು ಎತ್ತಿ ಹಿಡಿಯಿತು.

ಇನ್ನೂ ಅಪರಾಧಿಗೆ ವಿಧಿಸಲಾಗಿದ್ದಂತ 5 ವರ್ಷ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಹೆಚ್ಚಿಸಿತು. ಅಲ್ಲದೇ ಪೋಕ್ಸೋ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ಕೃತ್ಯಕ್ಕೆ ಕನಿಷ್ಠ 7 ವರ್ಷ ಜೈಲಿ ಶಿಕ್ಷೆ ನಿಗದಿಪಡಿಸಲಾಗಿದೆ. ಆದ್ರೇ 5 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯದ ತೀರ್ಪು ಕಾನೂನುಬಾಹಿರವಾಗಿದೆ ಎಂದು ಅಭಿಪ್ರಾಯ ಪಟ್ಟಿತು. ಜೊತೆಗೆ ವಿಶೇಷ ಕೋರ್ಟ್ ಆದೇಶದಲ್ಲಿ ಈ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯ ಕಂಡುಬರುತ್ತಿಲ್ಲ. ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವ ಯಾವುದೇ ಅಧಿಕಾರ ಪೋಕ್ಸೋ ವಿಶೇಷ ನ್ಯಾಯಲಯಕ್ಕೆ ಇಲ್ಲ ಎಂದು ಆದೇಶಿಸಿದೆ.