ಶಿಕ್ಷೆಯ ಬೆನ್ನಲ್ಲೇ ರಾಹುಲ್‌ ಗಾಂಧಿಗೆ ಬೇಲ್

ಶಿಕ್ಷೆಯ ಬೆನ್ನಲ್ಲೇ ರಾಹುಲ್‌ ಗಾಂಧಿಗೆ ಬೇಲ್

ಲ್ಲ ಕಳ್ಳರು ಮೋದಿ ಎಂಬ ಉಪ ನಾಮವನ್ನೇ ಏಕೆ ಹೊಂದಿರುತ್ತಾರೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಸೂರತ್‌ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈ ತೀರ್ಪು ಹೊರ ಬಿದ್ದ ಬೆನ್ನಲ್ಲೇ ರಾಹುಲ್‌ ಗಾಂಧಿಯವರಿಗೆ ಜಾಮೀನು ಸಸಹ ಮಂಜೂರಾಗಿದ್ದು, ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

2019 ರಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿ, ಎಲ್ಲ ಕಳ್ಳರು ಮೋದಿ ಎಂಬ ಉಪ ನಾಮವನ್ನೇ ಏಕೆ ಹೊಂದಿರುತ್ತಾರೆ ಎಂದು ಪ್ರಶ್ನಿಸಿದ್ದರು.

ನೀರವ್‌ ಮೋದಿ ವಂಚನೆ ಪ್ರಕರಣವನ್ನು ಹಿನ್ನೆಲೆಯಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಪರೋಕ್ಷವಾಗಿ ರಾಹುಲ್‌ ಟೀಕೆ ಮಾಡಿದ್ದರು.

ಈ ಹೇಳಿಕೆಯನ್ನು ಪ್ರಶ್ನಿಸಿ ಸೂರತ್‌ ನ್ಯಾಯಾಲಯದ ಮೆಟ್ಟಿಲೇರಿದ್ದು, ಇದೀಗ ತೀರ್ಪು ಹೊರ ಬಿದ್ದಿದೆ.