ಶಿಗ್ಗಾವಿಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ 5 ದಿನಗಳ ವಿಶೇಷ ಛಾಯಾಚಿತ್ರ ಪ್ರದರ್ಶನ

ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯದಿಂದ ಶಿಗ್ಗಾವಿಯ ಪುರಸಭೆ ಆವರಣದಲ್ಲಿ ನಡೆಯುತ್ತಿರುವ ಬುಡಕಟ್ಟು ಗೌರವ ದಿನ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತ 5 ದಿನಗಳ ವಿಶೇಷ ಛಾಯಾಚಿತ್ರ ಪದ್ರರ್ಶನದ 3ನೇ ದಿನ ಹಲವು ಕಾರ್ಯಕ್ರಮಗಳು ಜರುಗಿದವು.
ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸರ್ಕಾರದ ಸವಲತ್ತುಗಳು ಹಾಗೂ ಯೋಜನೆಗಳ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು.
ವಿಕಲಚೇತನ ವಿದ್ಯಾರ್ಥಿಗಳು ಹಾಗೂ ಹಲವು ನ್ಯೂನ್ಯತೆಯುಳ್ಳ ವಿಶೇಷ ಚೇತನ ಮಕ್ಕಳಿಗೆ ಸಮಾನ ಶಿಕ್ಷಣದ ಹಕ್ಕು, ಮದ್ಯಾಹ್ನದ ಬಿಸಿಯೂಟ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಅಷ್ಟೇ ಅಲ್ಲದೇ, ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮೆರೆದ, ಸರ್ಕಾರದ ಯೋಜನೆಗಳನ್ನು ಸಫಲವಾಗಿ ಬಳಸಿಕೊಂಡು ಸಾಧನೆಗೈದ ವಿದ್ಯಾರ್ಥಿಗಳಿಗೆ ಧಾರವಾಡದ ಕೇಂದ್ರ ಸಂವಹನ ಇಲಾಖೆಯಿಂದ ಪದಕ ನೀಡಲಾಯಿತು. ಶಾಲಾ ಮಕ್ಕಳಿಂದ ಸಾಂಸೃತಿಕ ಕಾರ್ಯಕ್ರಮಗಳು ಜರುಗಿದವು.
ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್.ಟಿ., ಮುರಳೀಧರ್ ಕಾರಬಾರಿ, ಪ್ರಸಾದ್ ಪುತ್ತೂರು, ಶಿಗ್ಗಾವಿಯ ಅಕ್ಷರ ದಾಸೋಹ ಸಹಾಯಕ ನಿರ್ದೆಶಕರಾದ ಅಶೋಕ ಕುಂಬಾರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.