ಶಿರಸಿಯಲ್ಲಿ `ಪರಿಸರ ವಿಶ್ವವಿದ್ಯಾಲಯ' ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಿದ್ದೇವೆ.
ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳು ಭಯಪಡುವ ಅಗತ್ಯವಿಲ್ಲ. ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂಬ ಮನವಿ ಮಾಡಲಾಗಿದೆ. ಅರಣ್ಯ ವಾಸಿಗಳಿಗೆ ಜೀವನಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಶಿರಸಿ ಪ್ರತ್ಯೇಕ ಜಿಲ್ಲೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಶೀಘ್ರದಲ್ಲೇ ಕುಮಟದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.