ಶಿರಾಡಿ ಘಾಟ್‌ ಹೆದ್ದಾರಿ ದುರಸ್ತಿಗೊಳಿಸುವಂತೆ ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆಗೆ ಮನವಿ

ಶಿರಾಡಿ ಘಾಟ್‌ ಹೆದ್ದಾರಿ ದುರಸ್ತಿಗೊಳಿಸುವಂತೆ ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆಗೆ ಮನವಿ

ಮಂಗಳೂರು: ನಗರದದಲ್ಲಿ ಮಳೆಯಿಂದ ಶಿರಾಡಿ ಘಾಟ್ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಹೊಂಡ ಗುಂಡಿಯ ರಸ್ತೆಯಿಂದಾಗಿ ಕೈಗಾರಿಕೋದ್ಯಮಿಗಳಿಗೆ ದೊಡ್ಡ ಮಟ್ಟದಲ್ಲೇ ಆರ್ಥಿಕ ಹೊಡೆತ ಬೀಳುತ್ತಿದೆ.ಇದೀಗ ಹೆದ್ದಾರಿ ರಿಪೇರಿಗಾಗಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಸಂಘಟನೆ ರಾಜ್ಯಸಭಾ ಸದಸ್ಯರು, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರ ಮೊರೆ ಹೋಗಿದ್ದಾರೆ.ಮಂಗಳೂರು- ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸೋ ಶಿರಾಡಿ ಘಾಟ್ . ವಾಣಿಜ್ಯ ವ್ಯವಹಾರದ ದೃಷ್ಟಿಯಿಂದ ನಿತ್ಯ ನೂರಾರು ಟ್ಯಾಂಕರ್, ಟ್ರಕ್, ಬಸ್ ಮತ್ತಿತರ ವಾಹನಗಳು ಈ ಹೆದ್ದಾರಿಯಲ್ಲಿ ಸಂಚರಿಸುತ್ತವೆ. ರಾಜ್ಯದ ಅತ್ಯಂತ ವಾಹನದಟ್ಟನೆ ಹೊಂದಿರೋ ರಸ್ತೆಯೂ ಹೌದು. ಆದರೆ ಇದೀಗ ಶಿರಾಡಿ ಘಾಟ್ ರಸ್ತೆ ಅಂದ್ರೆ ಪ್ರಯಾಣಿಕರು ಬೆಚ್ಚಿ ಬೀಳ್ತಾರೆ. ಇದಕ್ಕೆ ಕಾರಣ ಇಲ್ಲಿನ ರಸ್ತೆಗುಂಡಿಗಳು. ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಇದ್ದರೂ ಪರಿಹಾರ ಮಾತ್ರ ಕಂಡಿಲ್ಲ. ಹೀಗಾಗಿ ಮಂಗಳೂರಿನ ಕೆನರಾ ಚೇಂಬರ್ ಆಫ್ ಕಾರ್ಮಸ್ ಮತ್ತು ಇಂಡಸ್ಟ್ರಿ ಸಂಘಟನೆ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ ವಿರೇಂದ್ರ ಹೆಗ್ಗಡೆಯವರ ಮೊರೆ ಹೋಗಿದೆ.