ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ

ಬೆಂಗಳೂರು: ಇದೇ ದಿನಾಂಕ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆ ಗಳ ಸಮುದಾಯ ಆರೋಗ್ಯ ಕೇಂದ್ರ ವನ್ನಾಗಿ ಉನ್ನತೀ ಕರಿಸಲು, ಅಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಉಪಸ್ಥಿತರಿದ್ದ ಸಂಪುಟದ ಸಭೆ ಈ ನಿರ್ಧಾರ ಕೈಗೊಂಡಿದ್ದು ಬಹಳ ದಿನಗಳಿಂದ ಬೇಡಿಕೆಯಾಗಿಯೇ ಉಳಿದಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ಹೆಚ್ಚಿನ ಕಾರ್ಯ ಒತ್ತಡವಿರುವ ಒಟ್ಟು 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸುವ ಯೋಜನೆಯನ್ನು ಘೋಷಿಸಿದ್ದರು.
ಈ ಯೋಜನೆಯ ಲಾಭ ತಾಲೂಕಿನ ಜನತೆಗೆ ಪಡೆದುಕೊಳ್ಳಲು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ವಿಶೇಷ ಮುತುವರ್ಜಿ ವಹಿಸಿದ್ದರು.
ತಾಲೂಕಿನ ಜನತೆಯ ಬಹಳ ದಿನಗಳ ಬೇಡಿಕೆಯನ್ನು ಈಡೇರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕೃತಜ್ಞತೆ ಸಲ್ಲಿಸಿದ್ದಾರೆ.