ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ : ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ, ಆದರೆ ಪ್ರಧಾನಿ ಮೋದಿ ಆಗಮನದ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ. ರಾಘವೇಂದ್ರ, ಕೇಂದ್ರ ಸರ್ಕಾರ ಈ ಬಾರಿ ಅತ್ಯುತ್ತಮ ಬಜೆಟ್ ಮಂಡಿಸಿದೆ. ರೈಲ್ವೆ ಇಲಾಖೆಗೆ ಹೆಚ್ಚಿನ ಅನುದಾನ ಮೀಸಲಿಟ್ಟಿದ್ದಾರೆ. ರಾಜ್ಯದಲ್ಲಿ ಹೆಚ್ಚು ಲಾಭವಾಗಲಿದೆ ಎಂದು ತಿಳಿಸಿದ್ದಾರೆ.