ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ಮೂಹೂರ್ತ ಫಿಕ್ಸ್

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ಮೂಹೂರ್ತ ಫಿಕ್ಸ್

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯತ್ ಹಾಗೂ ಉಪಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 28 ರಂದು ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯಲಿದೆ.

ಸದ್ಯ ಹೊರಬಿದ್ದಿರುವ ಪ್ರಕಟಣೆಯ ಪ್ರಕಾರ ದಿನಾಂಕ 28-10-2022 ರಂದು ಮಧ್ಯಾಹ್ನ 3 ಗಂಟೆಗೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯಲಿದ್ದು, ಈ ಸಂಬಂಧ 12 ಗಂಟೆಯಿಂದ ಪ್ರಕ್ರಿಯೆಗಳು ಆರಂಭವಾಗಲಿದೆ.

ಇನ್ನೂ ಈ ಬಾರಿ ಮೇಯರ್ ಸ್ಥಾನವನ್ನು ಎಸ್ ಸಿ ಮೀಸಲಾಗಿ ಇಡಲಾಗಿದ್ದು, ಉಪಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ (ಅ) ಮಹಿಳೆ ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.