ಶಿವಮೊಗ್ಗದಲ್ಲಿ ಘೋರ ಘಟನೆ : ಮಗನೊಂದಿಗೆ ವಿಷ ಸೇವಿಸಿ ತಂದೆ-ತಾಯಿ ಆತ್ಮಹತ್ಯೆ

ಶಿವಮೊಗ್ಗದಲ್ಲಿ ಘೋರ ಘಟನೆ : ಮಗನೊಂದಿಗೆ ವಿಷ ಸೇವಿಸಿ ತಂದೆ-ತಾಯಿ ಆತ್ಮಹತ್ಯೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ಘಟನೆ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮಿಳಘಟ್ಟ ಮೊದಲನೇ ತಿರುವಿನಲ್ಲಿ ವಾಸವಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ.

ಮೃತರನ್ನು ಪರಂದಯ್ಯ(70) ದಾನಮ್ಮ (60) ಮಂಜುನಾಥ್ (25) ಎಂದು ಗುರುತಿಸಲಾಗಿದೆ. ಸಾಲಭಾದೆಯಲ್ಲಿ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದತ್ತು ಮಗ ಮಂಜುನಾಥ್ ಗೆ ಪಾಶ್ವ್ರವಾಯು ಇದ್ದ ಹಿನ್ನೆಲೆ ಮಾನಸಿಕ ನೊಂದಿದ್ದ ಕುಟುಂಬ ಆತನಿಗೆ ಚಿಕಿತ್ಸೆ ಕೊಡಿಸಲು ಹಲವು ಕಡೆ ಸಾಲ ಮಾಡಿಕೊಂಡಿದ್ದರು. ಈ ಹಿನ್ನೆಲೆ ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.