ಶಿವಸೇನೆʼಯ ಮುಖ್ಯಸ್ಥರಾಗಿ ಮಹಾ ಸಿಎಂ ʻಏಕನಾಥ್ ಶಿಂಧೆʼ ಆಯ್ಕೆ
ಮುಂಬೈ: ಚುನಾವಣಾ ಆಯೋಗವು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath Shinde) ಬಣಕ್ಕೆ ಶಿವಸೇನೆಯ ಹೆಸರು ಮತ್ತು ಚಿಹ್ನೆಯನ್ನು ನೀಡಿದ್ದು, ಮಂಗಳವಾರ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಆಯ್ಕೆ ಮಾಡಲಾಗಿದೆ.
ಮಂಗಳವಾರ ಸಂಜೆ ಮುಂಬೈನಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಶಿಂಧೆ ಅವರ ಹೆಸರನ್ನು ಶಿವಸೇನೆ ಮುಖ್ಯಸ್ಥರನ್ನಾಗಿ ಘೋಷಿಸಲಾಯಿತು. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರು, ಸಂಸದರು ಮತ್ತು ಶಿವಸೇನೆಯ ಇತರ ಮುಖಂಡರು ಭಾಗವಹಿಸಿದ್ದರು.
ʻಇಂದು(ಮಂಗಳವಾರ) ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ನಡೆಸಿದ್ದೇವೆ. ಏಕನಾಥ್ ಶಿಂಧೆ ನಮ್ಮ ಶಿವಸೇನೆ ಪಕ್ಷದ ಮುಖ್ಯಸ್ಥರಾಗಿರುತ್ತಾರೆ. ನಾವು ಅವರನ್ನು ಶಿವಸೇನೆಯ ನಾಯಕ ಎಂದು ಒಪ್ಪಿಕೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.
ಇದೇ ವೇಳೆ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಪ್ರಸ್ತಾವನೆಯನ್ನು ಪಕ್ಷದ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಉದಯ್ ಸಮಂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.