ಶೀಘ್ರದಲ್ಲೇ ಬಿಡುಗಡೆ ದಿನಾಂಕವನ್ನು ಘೋಷಿಸಲಿದ್ದಾರೆ 'ವಿಂಡೋ ಸೀಟ್' ಚಿತ್ರತಂಡ

ಶೀಘ್ರದಲ್ಲೇ ಬಿಡುಗಡೆ ದಿನಾಂಕವನ್ನು ಘೋಷಿಸಲಿದ್ದಾರೆ 'ವಿಂಡೋ ಸೀಟ್' ಚಿತ್ರತಂಡ

ಈಗಾಗಲೇ 'ಭಜರಂಗಿ 2' 'ಸಲಗ' ಹಾಗೂ 'ಲಂಕೆ' ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು ಇದರ ಬೆನ್ನಲ್ಲೇ 'ರಂಗಿತರಂಗ' ಖ್ಯಾತಿಯ ನಿರೂಪ್ ಭಂಡಾರಿ ನಟನೆಯ ಬಹುನಿರೀಕ್ಷೆಯ 'ವಿಂಡೋ ಸೀಟ್' ಚಿತ್ರದ ರಿಲೀಸ್ ದಿನಾಂಕವನ್ನು ಶೀಘ್ರದಲ್ಲೇ ಅನೌನ್ಸ್ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ.

ಶೀತಲ್ ಶೆಟ್ಟಿ ನಿರ್ದೇಶನದ ಮೊಟ್ಟ ಮೊದಲ ಚಿತ್ರ ಇದಾಗಿದ್ದು ಸಂಜನಾ ಆನಂದ್ ಹಾಗೂ ಅಮೃತಾ ಅಯ್ಯಂಗಾರ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಜಾಕ್ ಮಂಜು ಈ ಸಿನಿಮಾ ನಿರ್ಮಿಸಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಈ ಚಿತ್ರ ಸಾಕಷ್ಟು ಸದ್ದು ಮಾಡಿದೆ.