15,000 ಶಿಕ್ಷಕರ ನೇಮಕಾತಿ : ಶೀಘ್ರವೇ ಅಂತಿಮ ನೇಮಕಾತಿ ಪಟ್ಟಿ ಪ್ರಕಟ

15,000 ಶಿಕ್ಷಕರ ನೇಮಕಾತಿ : ಶೀಘ್ರವೇ ಅಂತಿಮ ನೇಮಕಾತಿ ಪಟ್ಟಿ ಪ್ರಕಟ

ಬೆಂಗಳೂರು: ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ ಕಾರಣ, 15,000 ಶಿಕ್ಷಕರ ನೇಮಕಾತಿ  ಪ್ರಕ್ರಿಯೆ ವಿಳಂಬಗೊಂಡಿತ್ತು. ಆದ್ರೇ ಇದೀಗ ಶಿಕ್ಷಣ ಇಲಾಖೆಯಿಂದ ಹೈಕೋರ್ಟ್ಅಂತಿಮ ತೀರ್ಪಿನ ಷರತ್ತಿನೊಂದಿಗೆ ಶೀಘ್ರವೇ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸಲಾಗುತ್ತದೆ ಎನ್ನಲಾಗುತ್ತಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದಂತ 15,000 6 ರಿಂದ 8ನೇ ತರಗತಿ ಶಿಕ್ಷಕರ ನೇಮಕಾತಿ ಪ್ರಕ್ರಿಯ ವಿಳಂಬ ತಪ್ಪಸಲು, ಈಗ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಹೈಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನ ಮೇಲೆ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಮಹಿಳಾ ಅಭ್ಯರ್ಥಿಗಳನ್ನೂ ಪರಿಗಣಿಸಿ, ಶೀಘ್ರವೇ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಿದೆ ಎನ್ನಲಾಗಿದೆ.

ಅಂದಹಾಗೇ ಹೈಕೋರ್ಟ್ ಗೆ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿರುವುದು ನಿಯಮಬಾಹಿರ ಎಂಬ ಕಾರಣ ನೀಡಿ, ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಈ ಅಭ್ಯರ್ಥಿಗಳನ್ನು 15,000 ಶಿಕ್ಷಕರ ನೇಮಕಾತಿಯಿಂದ ಕೈಬಿಡಲಾಗಿತ್ತು. ಇದನ್ನು ಹಲವು ಮಹಿಳಾ ಅಭ್ಯರ್ಥಿಗಳು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ತಂದೆಯ ಆದಾಯವನ್ನು ಪರಿಗಣಿಸಿ, ಜೊತೆಗೆ ಅಂತಿಮ ತೀರ್ಪಿಗೆ ಒಳಪಡುವ ಷರತ್ತಿನೊಂದಿಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸೂಚಿಸಿತ್ತು.

ಈ ಹಿನ್ನಲೆಯಲ್ಲಿ ಈಗ ಶಿಕ್ಷಣ ಇಲಾಖೆಯಿಂದ ಹೈಕೋರ್ಟ್ ಅಂತಿಮ ತೀರ್ಪಿನ ಷರತ್ತಿಗೆ ಒಳಪಟ್ಟು, ಅಭ್ಯರ್ಥಿಗಳಿಂದ ಸಹಿ ಪಡೆದು 15 ಸಾವಿರ ಶಿಕ್ಷಕರ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ.