ಶೀಘ್ರವೇ ಕಾಂಗ್ರೆಸ್ ನ 10 ಶಾಸಕರು ಬಿಜೆಪಿಗೆ ಸೇರ್ಪಡೆ : ಸಚಿವ ಆರ್. ಅಶೋಕ್ ಹೊಸ ಬಾಂಬ್
ಮಂಡ್ಯ : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕಂದಾಯ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದು, ಕಾಂಗ್ರೆಸ್ ಪಕ್ಷದ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಯಾಗಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಯಾಗಲು ಆಸಕ್ತಿ ತೋರಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಾನು ಈಗಾಗಲೇ ಕೆಲ ಕಾಂಗ್ರೆಸ್ ಶಾಸಕರ ಜೊತೆಗೆ ಮಾತನಾಡಿದ್ದೇವೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ 70 ಸ್ಥಾನಗಳನ್ನು ಗೆಲ್ಲುವುದು ಕಷ್ಟವಾಗಲಿದೆ. ಜೆಡಿಎಸ್ 13 ಸ್ಥಾನ ಗಳಲ್ಲಿ ಮಾತ್ರ ಗೆಲ್ಲಬಹುದು ಎಂದು ಹೇಳಿದ್ದಾರೆ.