ಶೀಘ್ರವೇ 'ಕೆಂಗಲ್ ಹನುಮಂತಯ್ಯ' ಜೀವನ ಚರಿತ್ರೆಯ ಗ್ರಂಥ ಬಿಡುಗಡೆ : ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು : ಶೀಘ್ರವೇ 'ಕೆಂಗಲ್ ಹನುಮಂತಯ್ಯ' ಜೀವನ ಚರಿತ್ರೆಯ ಗ್ರಂಥ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಶೀಘ್ರವೇ 'ಕೆಂಗಲ್ ಹನುಮಂತಯ್ಯ' ಜೀವನ ಚರಿತ್ರೆಯ ಗ್ರಂಥ ಬಿಡುಗಡೆ ಮಾಡಲಾಗುತ್ತದೆ.
ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದರು.
ಈಗಾಗಲೇ ರಾಮನಗರದಲ್ಲಿ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಆದಷ್ಟು ಬೇಗನೆ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.