ಶೀಘ್ರವೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಹೆಚ್.ಡಿ.ರೇವಣ್ಣ
ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ ಹಾಸನದ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು. ಶಿವಲಿಂಗೇಗೌಡರು ಪಕ್ಷ ತೊರೆಯುವುದಿಲ್ಲ ಎಂದು ಅವರೇ ಹೇಳಿದ್ದಾರೆ. ದೇವೇಗೌಡರು ಇರುವವರೆಗೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.