ಶೀಘ್ರವೇ ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ಸ್ಥಾಪನೆ
ಬೆಂಗಳೂರು : ವಿಧಾನಸೌಧದ ಎದುರು ಬಸವೇಶ್ವರರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನುಪ್ರತಿಷ್ಠಾಪಿಸುವ ಸಂಬಂಧ ಕಂದಾಯ ಸಚಿವ ಅರ್. ಅಶೋಕ್ ಹಾಗೂ ಸಚಿವ ಸಿ.ಸಿ. ಪಾಟೀಲ್ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಕಂದಾಯ ಸಚಿವ ಆರ್.
ಬಸವಣ್ಣನವರ ಮತ್ತು ಕೆಂಪೇಗೌಡರ ಪ್ರತಿಮೆಗಳ ಮಾದರಿಯನ್ನು ಸಿದ್ಧಪಡಿಸಿ ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿತ್ತು. ಅದರಂತೆ ಅವರು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಉಭಯ ಸಚಿವರೂ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.