ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟಿ 'ರಾಗಿಣಿ ದ್ವಿವೇದಿ' ಕೈಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟಿ 'ರಾಗಿಣಿ ದ್ವಿವೇದಿ' ಕೈಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ತುಪ್ಪದ ಬೆಡಗಿ ನಟಿ ರಾಗಿಣಿ ಶೂಟಿಂಗ್ ವೇಳೆ ಗಂಭೀರ ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚೆನ್ನೈನಲ್ಲಿ ಸಿನಿಮಾವೊಂದರ ಶೂಟಿಂಗ್ ವೇಳೆ ಕೈಗೆ ಬಲವಾಗಿ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಮಾಂಡೋʼ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ರಾಗಿಣಿಗೆ ವೈದ್ಯರು ನಾಲ್ಕು ದಿನಗಳ ಬೆಡ್ ರೆಸ್ಟ್ ನಲ್ಲಿರುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.ʻಕಮಾಂಡೋʼ ಸಿನಿಮಾ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.

ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಮತ್ತೆ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದು, ಬ್ಯಾಕ್ ಟೂ ಬ್ಯಾಕ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕೆಂಪೇಗೌಡ ಸಿನಿಮಾದ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ ನಟಿ ಮತ್ತೆ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು.