ಶೃಂಗೇರಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
ಶೃಂಗೇರಿ: ಶೃಂಗೇರಿಗೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ನರಸಿಂಹವನದ ಶ್ರೀ ಮಠಕ್ಕೆ ಭೇಟಿ ನೀಡಿ ಜಗದ್ಗುರುಗಳ ದರ್ಶನ ಪಡೆದರು.
ಜಗದ್ಗುರುಗಳ ಆಶೀರ್ವಾದ ಪಡೆದ ಬಳಿಕ ಶಾರದಾಂಬೆ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಒಳಭಾಗದ ವಸತಿ ಗೃಹದಲ್ಲಿ ವಾಸ್ತವ್ಯ.
ಶ್ರೀಮಠದಿಂದ ತುಂಗಾನದಿಯ ಕಿರುಸೇತುವೆ ಮೇಲೆ ಕಾಲ್ನಡಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು. ಬೆಳಗ್ಗೆ ಶಾರದಾಂಬೆ ದರ್ಶನ ಪಡೆಯಲಿರುವ ಅವರು ಬಳಿಕ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ.