ಶೆರೇವಾಡದ ಬಳಿ ಬಸ್ ಪಲ್ಟಿ- ಡ್ರೈವರ್ ಸಾವು, ಹಲವರಿಗೆ ಗಂಭೀರ ಗಾಯ

ಶೆರೇವಾಡದ ಬಳಿ ಬಸ್ ಪಲ್ಟಿ- ಡ್ರೈವರ್ ಸಾವು, ಹಲವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನ ಟೈಯರವೊಂದು ಬ್ಲಾಸ್ಟ್ ಆಗಿ ಬಸ್ಸು ಪಲ್ಟಿಯಾದ ಪರಿಣಾಮ ಬಸ್ಸಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಶೆರೆವಾಡ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆದಿದೆ. 

ಗದಗ ಜಿಲ್ಲೆಯ ಲಕ್ಷ್ಮೇಶ್ವರದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Ka 25 f 3097 ನೊಂದಣಿಯ ಸಾರಿಗೆ ಬಸ್ಸು ಶೆರೆವಾಡ ಗ್ರಾಮದ ಬಳಿ ಏಕಾಏಕಿ ಟೈಯರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಬಸ್ಸಿನಲ್ಲಿಯೇ ಸಿಲುಕಿ ಸಾವನ್ನಪ್ಪಿದ್ದರೇ, ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 

ಇನ್ನು ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ ಪೋಲಿಸ ಠಾಣೆಯಲ್ಲಿ ದೂರು ದಾಖಲಾಗಿದೆ.