ಶ್ರದ್ಧಾ ವಾಲ್ಕರ್ ಹತ್ಯೆ: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ: ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಲ್ಕರ್ ಅವರ ಕತ್ತು ಹಿಸುಕಿ ಕೊಂದ ಆರೋಪಿ ಅಫ್ತಾಬ್ ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ. ಜಾಮೀನು ಅರ್ಜಿಯನ್ನು ಬಾಕಿ ಇರಿಸಲಾಗುವುದು ಮತ್ತು ಆರೋಪಿ ವಕೀಲರನ್ನು ಭೇಟಿಯಾದ ನಂತರವೇ ಮನವಿಯನ್ನು ಇರಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದರು.