ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರ ಮೇಲೆ ಫೈರಿಂಗ್ ಪ್ರಕರಣ : ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರ ಮೇಲೆ ಫೈರಿಂಗ್ ಪ್ರಕರಣ : ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳಗಾವಿ: ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರವಿ ಕೋಕಿತಕರ್ ಮೇಲೆ ಫೈರಿಂಗ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹಳೇ ಧ್ವೇಷ, ವೈಯಕ್ತಿಕ ವಿಚಾರಕ್ಕೆ ಆರೋಪಿಗಳು ರವಿ ಕೋಕಿತಕರ್ ಹತ್ಯೆಗೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಗಾಯಾಳು ರವಿ ಕೋಕಿತಕರ್, ಚಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅದರಂತೆ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಅವರು ಆರೋಗ್ಯ ವಿಚಾರಿಸಿದ್ದಾರೆ. ಇಂದು ಮಧ್ಯಾಹ್ನ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಸುದ್ದಿಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.