ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಈ ದಾಖಲೆಗಳ ಮೇಲೆ ಕಣ್ಣಿಟ್ಟ ಯುಜ್ವೇಂದ್ರ ಚಹಾಲ್
2023ರ ಹೊಸ ವರ್ಷದಲ್ಲಿ 3 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು ಶ್ರೀಲಂಕಾ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಇದೇ ವೇಳೆ ಭಾರತದ ಬಲಗೈ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರು ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಮತ್ತೊಂದು ಮೈಲಿಗಲ್ಲನ್ನು ಸಾಧಿಸಲು ಎದುರು ನೋಡುತ್ತಿದ್ದಾರೆ.
ಜನವರಿ 3ರ ಮಂಗಳವಾರ ಮುಂಬೈನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಹೋಗುವ ಮುನ್ನ ಯುಜ್ವೇಂದ್ರ ಚಾಹಲ್ ಚುಟುಕು ಸ್ವರೂಪದಲ್ಲಿ ಭಾರತದ ಪ್ರಮುಖ ವಿಕೆಟ್ ಟೇಕರ್ಗಳಲ್ಲಿ ಒಬ್ಬರಾಗಿದ್ದಾರೆ.