ಸಂಕಷ್ಟದಲ್ಲಿರುವ 'ತೊಗರಿ' ಬೆಳೆಗಾರರಿಗೆ ಗುಡ್ ನ್ಯೂಸ್ : ಇಂದು ಸಂಜೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ..!

ಸಂಕಷ್ಟದಲ್ಲಿರುವ 'ತೊಗರಿ' ಬೆಳೆಗಾರರಿಗೆ ಗುಡ್ ನ್ಯೂಸ್ : ಇಂದು ಸಂಜೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ..!

ಬೆಂಗಳೂರು : ಸಂಕಷ್ಟದಲ್ಲಿರುವ ತೊಗರಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ತೊಗರಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು ಇಂದು ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ .ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆಯಲ್ಲಿ ಚರ್ಚಿಸಿ ನಂತರ ಪರಿಹಾರ ಎಷ್ಟು ಕೊಡಬೇಕು ಎಂಬುದನ್ನು ತೀರ್ಮಾನಿಸಿ ಘೋಷಣೆ ಮಾಡಲಾಗುತ್ತದೆ ಎಂದರು.

ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದೆ. ಸಂಕಷ್ಟದಲ್ಲಿರುವ ತೊಗರಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು ಇಂದು ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಶೀಘ್ರದಲ್ಲೇ 'ಕೋಲಿ ಸಮಾಜ' ಪರಿಶಿಷ್ಟ ಪಂಗಡಕ್ಕೆ ಗೆ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ( C.M Basavaraj Bommai ) ಹೇಳಿದರು.ಕಲಬುರಗಿ ಜಿಲ್ಲೆಯ ಅಪಜಲಾಪುರ ತಾಲೂಕಿನ ಗಾಣಗಾಪುರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಜನರು ತಮ್ಮ ಹಕ್ಕುಗಳನ್ನು ಕೇಳಲು ಪ್ರಾರಂಭಿಸಿದ್ದಾರೆ. 'ಕೋಲಿ ಸಮಾಜ' ವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಇಂದು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಧ್ಯಾಹ್ನ 12.05 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 12.45 ಗಂಟೆಗೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರಕ್ಕೆ ಆಗಮಿಸಿದ್ದಾರೆ. ನಂತರ ದೇವಲ ಗಾಣಗಾಪುರದಲ್ಲಿ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.