ಸಂಕ್ರಾತಿ ಬಳಿಕ ಚೇತರಿಕೆಯಾಗಲಿದೆ ಅಡಿಕೆ ಮಾರುಕಟ್ಟೆ

ಸಂಕ್ರಾತಿ ಬಳಿಕ ಚೇತರಿಕೆಯಾಗಲಿದೆ ಅಡಿಕೆ ಮಾರುಕಟ್ಟೆ

ಮಂಗಳೂರು: ಸಂಕ್ರಾತಿ ಬಳಿಕ ಚಾಲಿ ಅಡಿಕೆಗೂ ಪೂರ್ತಿಯಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ. ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ. ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ. ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ಕಡಿಮೆಯಾಗಿದೆ. ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು ಎಂದಿದ್ದಾರೆ.