ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು: ಬೆಳಗಾವಿಯಲ್ಲಿನ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಶನಿವಾರ ನಸುಕಿನಲ್ಲಿ ಭಗ್ನಗೊಳಿಸಲಾಗಿದೆ. ಇದನ್ನು ಖಂಡಿಸಿ ಇಲ್ಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ಮಹಾತ್ಮ ಗಾಂಧಿ ಪುತ್ಥಳಿ ಮುಂದೆ ಶನಿವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಪೊಲೀಸರು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘ, ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಸೇರಿದಂತೆ ಹಲವು ಮಂದಿ ಈ ಪ್ರತಿಭಟನೆಯಲ್ಲಿದ್ದರು.