ಸಂಪುಟ ವಿಸ್ತರಣೆ ಹಿನ್ನೆಲೆ; ಸಿಎಂ ಭೇಟಿಯಾದ ಸಚಿವಾಕಾಂಕ್ಷಿಗಳು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದ್ದು, ಸಿಎಂ ಭೇಟಿಯಾಗಿ ಲಾಭಿ ಆರಂಭಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದ ಶಾಸಕ ರಮೇಶ್ ಜಾರಕಿಹೊಳಿ, ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಸಚಿವಸ್ಥಾನಕ್ಕಾಗಿ ಮಾತುಕತೆ ನಡೆಸಿದ್ದಾರೆ.
ಈ ವಾರಾಂತ್ಯದಲ್ಲಿ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆಗೆ ವರಿಷ್ಠರ ಜೊತೆ ಮಾತನಾಡುವಂತೆ ಉಭಯ ನಾಯಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.