SC, ST ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಷೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು

SC, ST ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಷೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು

ಬೆಂಗಳೂರ: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಆದೇಶಿಸಿತ್ತು. ಇದೀಗ ಈ ನಿರ್ಣಯವನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಪ್ರಮಾಣವನ್ನು ಶೇ.15ರಿಂದ 17ಕ್ಕೆ, ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ 7ಕ್ಕೆ ಹೆಚ್ಚಳ ಮಾಡುವ ನಿರ್ಣಯವನ್ನು ಸಂವಿಧಾನದ ಷೆಡ್ಯೂಲ್ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ.

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ನಿರ್ಣಯಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ ಕಾರಣ, ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಮೀಸಲಾತಿ ಹೆಚ್ಚಳದ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ.