ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಆಹ್ವಾನ ನೀಡಿದ್ದೇವೆ : ಸಚಿವ ಅಶ್ವತ್ಥ್ ನಾರಾಯಣ

ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಆಹ್ವಾನ ನೀಡಿದ್ದೇವೆ : ಸಚಿವ ಅಶ್ವತ್ಥ್ ನಾರಾಯಣ

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರಿಗೆ ಬಿಜೆಪಿ ಪಕ್ಷಕ್ಕೆ ಆಹ್ವಾನ ಕೊಟ್ಟಿದ್ದೇವೆ.

ಬೆಂಬಲಿಗರ ಜೊತೆ ಮಾತನಾಡಿ, ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬಂದರೆ ಅವರನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತೇವೆ ಎಂದು ತಿಳಿಸಿದರು.

ಸುಮಲತಾ ಅಂಬರೀಶ್ ಬಿಜೆಪಿಯ ಅಸೋಸಿಯೇಟ್ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸುಮಲತಾ ಅಂಬರೀಶ್ ನಮ್ಮ ಪಕ್ಷಕ್ಕೆ ಅಸೋಸಿಯೇಟ್ ಆದರೆ ಸಂತೋಷವೇ. ಅದನ್ನು ನಾವು ಸ್ವಾಗತ ಮಾಡುತ್ತೇವೆ. ಈಗಾಗಲೇ ಸುಮಲತಾ ಅವರಿಗೆ ಬಿಜೆಪಿಗೆ ಆಹ್ವಾನ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.