ಸಂಸದೆ ಸುಮಲತಾ ಬಿಜೆಪಿ ಅಸೋಸಿಯೇಟ್ ಮೆಂಬರ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ: ಸಂಸದೆ ಸುಮಲತಾ ಬಿಜೆಪಿ ಅಸೋಸಿಯೇಟ್ ಮೆಂಬರ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರದ್ದು ಸುಳ್ಳಿನ ಯುನಿವರ್ಸಿಟಿ.
ರಾಜ್ಯದಲ್ಲಿ 26 ಸಂಸದರು ಬಿಜೆಪಿಯವರಿದ್ದಾರೆ. ಸುಮಲತಾ ಕೂಡಾ ಬಿಜೆಪಿ ಅಸೋಸಿಯೇಟ್ ಮೆಂಬರೂ ಆದರೂ, ಮಹದಾಯಿಗೆ ಇವರೆಲ್ಲ ಸೇರಿ ಪ್ರಧಾನಮಂತ್ರಿಗಳ ಬಳಿ ಒಮ್ಮೆಯೂ ಮಾತನಾಡಿಲ್ಲ. ನೀರು ಹರಿಸುವ ಮುನ್ನ ಮೂಲಭೂತ ಕಾಮಗಾರಿಯನ್ನಾದರೂ ಪೂರ್ಣಗೊಳಿಸಬಹುದಿತ್ತು ಎಂದರು. ರಾಜ್ಯ , ಗೋವಾ, ಕೇಂದ್ರದಲ್ಲಿ ತನ್ನದೆಯಾದ ಬಿಜೆಪಿ ಸರ್ಕಾರವಿದ್ದರೂ ಮೂರು ವರ್ಷದಿಂದ ಮಹದಾಯಿ ಯೋಜನೆ ಜಾರಿಗೊಳಿಸಲು ಆಗಿಲ್ಲ.
ಈಗ ನಾವು ಜನರ ಧ್ವನಿ ಎತ್ತಿದಾಗ ಹೆದರಿ ಡಿಪಿಆರ್ ಗೆ ಅನುಮತಿ ಪಡೆದುಕೊಂಡು ಬಂದಿದ್ದಾರೆ ಎಂದು ಡಿಕೆ ಶಿವ ಕುಮಾರ್ ಆರೋಪಿಸಿದರು.