ನವೆಂಬರ್ 26ರಂದು ತೆರೆಮೇಲೆ ಬರಲಿದೆ 'ಸಖತ್'

ನವೆಂಬರ್ 26ರಂದು ತೆರೆಮೇಲೆ ಬರಲಿದೆ 'ಸಖತ್'

ದೀಪಾವಳಿ ಹಬ್ಬದ ಪ್ರಯುಕ್ತ ಈಗಾಗಲೇ ಸಾಕಷ್ಟು ಸಿನಿಮಾಗಳ ಪೋಸ್ಟರ್‌ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು ಇದರ ಬೆನ್ನಲ್ಲೇ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಸಖತ್' ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಇದೇ ತಿಂಗಳು ನವೆಂಬರ್ 26ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ನಿಶಾ ವೆಂಕಟ್ ಕೋನಂಕಿ ಹಾಗೂ ಸುಪ್ರೀತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು. ಸಿಂಪಲ್ ಸುನಿ ಆಕ್ಷನ್ ಕಟ್ ಹೇಳಿದ್ದಾರೆ.

ಈ ಚಿತ್ರದಲ್ಲಿ ಗಣೇಶ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದು ಕುರುಡನ ಪಾತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಸಿನಿಮಾ ಟೀಸರ್ ಹಾಗೂ ಹಾಡು ಸಿನಿ ಪ್ರೇಕ್ಷಕರ ಗಮನ ಸೆಳೆದಿವೆ ಜುಡಾ ಸ್ಯಾಂಡಿ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ