ಸಚಿವ ಅಶ್ವತ್ಥನಾರಾಯಣ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ : ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ

ಸಚಿವ ಅಶ್ವತ್ಥನಾರಾಯಣ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ : ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ

ಬೆಂಗಳೂರು: ಟಿಪ್ಪು ಸುಲ್ತಾನ್ ಕೊಂದಂತೆ ಸಿದ್ಧರಾಮಯ್ಯ ಕೊಲ್ಲಬೇಕು ಎಂಬುದಾಗಿ ಕರೆ ನೀಡಿದಂತ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪಕ್ಷದ ನಾಯಕರು ಸಿಡಿದೆದ್ದಿದ್ದಾರೆ. ಇಂದು ಅವರ ಹೇಳಿಕೆ ಖಂಡಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆಗೆ ಕರೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಂದು ಬೆಳಿಗ್ಗೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ. ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ತೆರಳಲಿದ್ದಾರೆ.

ಬೆಂಗಳೂರು ದಕ್ಷಿಣ, ಉತ್ತರ ಹಾಗೂ ಕೇಂದ್ರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಈ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಪ್ರತಿಭಟನಾ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ.ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಕಾಂಗ್ರೆಸ್ ನಾಯಕರು ಕರೆ ನೀಡಿರುವ ಹಿನ್ನಲೆಯಲ್ಲಿ, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ ಬಜೆಟ್ ಮಂಡನೆ ಇರೋ ಕಾರಣ, ಯಾವುದೇ ಸಮಸ್ಯೆ ಆಗದಂತೆ ಕಾನೂನು ಸುವ್ಯವಸ್ಥೆ ನಿಯಂತ್ರಣ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.