ಸಚಿವ 'ಅಶ್ವಥ್ ನಾರಾಯಣ್' ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ : ಇಂದು ಹೊನ್ನಾಳಿ ಬಂದ್ ಗೆ ಕರೆ

ಸಚಿವ 'ಅಶ್ವಥ್ ನಾರಾಯಣ್' ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ : ಇಂದು ಹೊನ್ನಾಳಿ ಬಂದ್ ಗೆ ಕರೆ

ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಿದ್ದರಾಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಕುರುಬ ಸಮುದಾಯದವರು ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಬಂದ್ ಗೆ ಕರೆ ನೀಡಿದ್ದಾರೆ.

ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕ್ರಮ ಕೈಗೊಂಡು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಇಂದು ಹೊನ್ನಾಳಿ ಬಂದ್ ಗೆ ಕರೆ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ H. B ಮಂಜಪ್ಪ ಮಾಹಿತಿ ನೀಡಿದ್ದಾರೆ. ಟಿಪ್ಪು ಸುಲ್ತಾನ್ ನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಕೂಡ ಹೊಡೆದು ಹಾಕಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಸಚಿವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.