ಸಚಿವ ಆನಂದ್ ಸಿಂಗ್ ನಂಟು ಹೊಂದಿದ್ದ ಕಂಪನಿಗಳ ಆಸ್ತಿ ಮುಟ್ಟುಗೋಲು

ಆನಂದ್ ಸಿಂಗ್ ಕುಟುಂಬ ಒಡೆತನದ ಎರಡು ಗಣಿಗಳೂ ಸೇರಿದಂತೆ ಒಟ್ಟು ಮೂರು ಗಣಿಗಳು ಅದಿರು ಕಳ್ಳ ಸಾಗಣೆ ಮಾಡಿದ ಆರೋಪದಲ್ಲಿ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ.
ಮಿನರಲ್ ಎಂಟರ್ಪ್ರೈಸಸ್ ಲಿಮಿಟೆಡ್ ನ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಕೋರಿಕೆಯಂತೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ಸಲ್ಲಿಸಿದ್ದ ತನಿಖಾ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಲ್ಲದೆ ಹಣದ ಅಕ್ರಮ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸಿತ್ತು