ಸಚಿವ ಉಮೇಶ್ ಕತ್ತಿ ನಿಧನ

ತೀವ್ರ ಹೃದಯಘಾತದಿಂದ ನಿಧನರಾದ ಬಿಜೆಪಿ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರ ನೋಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭಲ್ಲಿ ಸಚಿವರಾದ ಶ್ರೀ ಅಶ್ವತ್ಥನಾರಾಯಣ, ಶ್ರೀ ಗೋವಿಂದ ಕಾರಜೋಳ, ಶ್ರೀ ಮುನಿರತ್ನ, ಡಾ.ಕೆ ಸುಧಾಕರ್, ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.