ಸಚಿವ ಮುನಿರತ್ನ ನಾಯ್ಡು ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ ಕಾಂಗ್ರೆಸ್

ರಾಜ್ಯದಲ್ಲಿಯ ಪೇಸಿಎಂ ಪೋಸ್ಟರ್ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದೀಗ ಅದೇ ಮಾದರಿಯಲ್ಲಿ ಆರ್.ಆರ್.ನಗರ ಶಾಸಕ, ಸಚಿವ ಮುನಿರತ್ನ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಂಟಿಸಿದೆ. ಇಂದು ಬೆಳಗ್ಗೆ ಆರ್.ಆರ್.ನಗರದ ಪ್ರಮುಖ ಬೀದಿಗಳಲ್ಲಿ Guess & Win Contest ಹೆಸರಿನಡಿ ದೊಡ್ಡ ದೊಡ್ಡ ಪೋಸ್ಟರ್ಗಳನ್ನು ಅಂಟಿಸಲಾಗಿದೆ.