ಮಠ, ಮಂದಿರ, ದೇವಸ್ಥಾನಗಳಅಭಿವೃದ್ಧಿಗೆ 8 ಕೋಟಿ ಅನುದಾನ ಸಚಿವ ಶಂಕರ ಪಾಟೀಲ ಮುನೆನಕೊಪ್ಪ

ಧಾರವಾಡ ಜಿಲ್ಲೆಯ ಸುಳ್ಳ ಗ್ರಾಮದ ಪಂಚಗೃಹ ಹಿರೇಮಠ ಆವರಣದಲ್ಲಿ ಪಂಚಗೃಹ ಹಿರೇಮಠದ ಪಟ್ಟದ್ಯಕ್ಷರಾದ ಶಿವಸಿದ್ದರಾಮೇಶ್ವರ ಶಿವಾಚಾರ್ಯರರ ದಿವ್ಯ ಸಾನಿಧ್ಯದಲ್ಲಿ ವೀರಸೋಮೇಶ್ವರ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಭೂಮಿ ಪೂಜೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಧಾರವಾಡ ಜಿಲ್ಲೆ ಹಾಗೂ ನವಲಗುಂದ ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ರೈತರ ಹಿತ ಕಾಪಾಡಿ  ಗ್ರಾಮಗಳ ಅಭಿವೃದ್ಧಿಗಾಗಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಮಂಜೂರಾತಿ ನೀಡಿದ್ದೇನೆ ಎಂದರು

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಶಿವಸಿದ್ದರಾಮೇಶ್ವರ ಶಿವಾಚಾರ್ಯರು ಮಾತನಾಡಿ, ಪ್ರಾಮಾಣಿಕತೆಯಿಂದ ಮಾಡುವ ಪ್ರತಿ ಕೆಲಸ ಪರಮಾತ್ಮನಿಗೆ ಪ್ರಿಯವಾಗುತ್ತದೆ. ಧರ್ಮ, ದೇವರು, ಸಂಸ್ಕಾರ, ಸಂಸ್ಕøತಿ ಉಳಿಯಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅನೇಕ ಗ್ಯಣ್ಯರು, ಗ್ರಾಮದ ಪ್ರಮುಖರು ಸೇರಿದಂತೆ ಮಹಿಳಾ ಮಂಡಳ ಸದಸ್ಯರು ಭಾಗವಹಿದ್ದರು.