ಸಚಿವ ಶ್ರೀರಾಮುಲು ವಿರುದ್ಧ ಅಕ್ರಮ ಭೂಹಗರಣ ಆರೋಪ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಉಗ್ರಪ್ಪ ಆಗ್ರಹ

ಸಚಿವ ಶ್ರೀರಾಮುಲು ವಿರುದ್ಧ ಅಕ್ರಮ ಭೂಹಗರಣ ಆರೋಪ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಉಗ್ರಪ್ಪ ಆಗ್ರಹ

ಳ್ಳಾರಿ : ಸಾರಿಗೆ ಸಚಿವ ಬಿ.ಶ್ರೀರಾಮುಲು ವಿರುದ್ಧ ಅಕ್ರಮ ಭೂ ಹಗರಣ ಆರೋಪ ಕೇಳಿ ಬಂದಿದ್ದು, ಸಚಿವ ಶ್ರೀರಾಮುಲು ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಂಸದ ಉಗ್ರಪ್ಪ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಆಕುಲ ಲಕ್ಷ್ಮಮ್ಮ ಎಂಬುವರಿಗೆ ಸೇರಿದ 27.25 ಎಕರೆ ಜಮೀನಿನ ಪೈಕಿ 17.25 ಎಕರೆ ಜಮೀನನ್ನು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಭೂ ಅಕ್ರಮ ಮಾಡಿದ್ದಾರೆ ಎಂಬ ಆರೋಪದಡಿ ದೂರು ದಾಖಲಾಗಿ, ದೋಷಾರೋಪ ಪಟ್ಟಿಯೂ ಸಲ್ಲಿಕೆಯಾಗಿದೆ. ಕಾನೂನಿನ ಮೇಲೆ ಗೌರವ ಇದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಇಲ್ಲವೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದಿಂದ ಶ್ರೀರಾಮುಲು ಅವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದಾರೆ.

ಇನ್ನು ಶ್ರೀರಾಮುಲು ಭೂಹಗರಣ ಪ್ರಕರಣವನ್ನು ನಾವು ಸುಮ್ಮನೆ ಬಿಡುವುದಿಲ್ಲ. ಸದನದೊಳಗೆ ಈ ವಿಷಯ ಪ್ರಸ್ತಾಪ ಮಾಡುತ್ತೇವೆ, ರಾಜ್ಯಪಾಲರಿಗೆ ದೂರು ಕೊಡುತ್ತೇವೆ, ಜನತಾ ನ್ಯಾಯಾಲಯದ ಮುಂದೆ ತೆಗೆದುಕೊಂಡು ಹೋಗುತ್ತೇವೆ ಎಂದರು.