ಸಚಿವ ಸುನಿಲ್‌ ಕುಮಾರ್‌ ವಿರುದ್ದ ಸಿಡಿದೆದ್ದ ಹಿಂದೂ ಕಾರ್ಯಕರ್ತರು

ಸಚಿವ ಸುನಿಲ್‌ ಕುಮಾರ್‌ ವಿರುದ್ದ ಸಿಡಿದೆದ್ದ ಹಿಂದೂ ಕಾರ್ಯಕರ್ತರು

ಬೆಂಗಳೂರು: ಹಿಂದೂ ಕಾರ್ಯಕರ್ತರ ಮೇಲೆ ಕಾರ್ಕಳ ಕ್ಷೇತ್ರದಲ್ಲಿ ಸಚಿವ ಸುನಿಲ್‌ ಕುಮಾರ್‌ ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುನಿಲ್‌ ಕುಮಾರ್‌ ಅವರು ಹಿಂದೂ ಕಾರ್ಯಕರ್ತ& ನಾಯಕರ ಮೇಲೆ ಪದೇ ಪದೇ ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಶ್ರೀರಾಮ ಸೇನೆಯ ಬೆಂಗಳೂರು ವಿಭಾಗ, ದೌರ್ಜನ್ಯ ನಡೆಸುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.