ಸಚಿವರ ಹೇಳಿಕೆಗೆ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಸಚಿವರ ಹೇಳಿಕೆಗೆ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವಾಗಲೂ ಸಚಿವರು ವೈಯಕ್ತಿಕವಾಗಿ ನೀಡಿದ ಹೇಳಿಕೆಗೆ ಸರ್ಕಾರ ಕಾರಣವಾಗುವುದಿಲ್ಲ, ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ನವದೆಹಲಿ: ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವಾಗಲೂ ಸಚಿವರು ವೈಯಕ್ತಿಕವಾಗಿ ನೀಡಿದ ಹೇಳಿಕೆಗೆ ಸರ್ಕಾರ ಕಾರಣವಾಗುವುದಿಲ್ಲ, ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಜಸ್ಟಿಸ್ ಎಸ್ ಎ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇಂದು ವಿಚಾರಣೆ ನಡೆಸಿ, ಸಂವಿಧಾನದ 19(2) ನೇ ವಿಧಿಯ ಅಡಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯವನ್ನು ಹೊರತುಪಡಿಸಿ ಯಾವುದೇ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ ಎಂದು ಹೇಳಿದೆ. ದೇಶದ ಯಾವುದೇ ಪ್ರಕರಣಗಳು, ವಿದ್ಯಮಾನಗಳಿಗೆ ಸಂಬಂಧಪಟ್ಟಂತೆ ಅಥವಾ ಸರ್ಕಾರವನ್ನು ರಕ್ಷಿಸುವ ರೀತಿಯ ಹೇಳಿಕೆಗಳನ್ನು ಸಚಿವರು ನೀಡಿದ್ದರೂ ಕೂಡ ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವ ಸರ್ಕಾರವನ್ನು ಸಚಿವರ ಹೇಳಿಕೆಯಿಂದ ದೂಷಿಸಲು ಅಥವಾ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ. ಸಂವಿಧಾನ ವಿಧಿ 19 (1) (ಎ) ಅಡಿಯಲ್ಲಿ ಮೂಲಭೂತ ಹಕ್ಕನ್ನು ದೇಶವನ್ನು ಹೊರತುಪಡಿಸಿ ಇತರರ ಮೇಲೂ ಚಲಾಯಿಸಬಹುದು ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಎ ಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ನ್ಯಾಯಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು ಮಾತ್ರ ಪ್ರತ್ಯೇಕ ತೀರ್ಪು ನೀಡಿದ್ದಾರೆ.