ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ರೌಡಿಶೀಟರ್ ಹತ್ಯೆಗೆ ಯತ್ನ

ಬೆಂಗಳೂರು: ಬೆಳ್ಳಂ ಬೆಳಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ಸ್ನೇಹಿತರಿಂದ ರೌಡಿಶೀಟರ್ ಗಗನ್ ಶರ್ಮಾ ಕೊಲೆಗೆ ಯತ್ನ ನಡೆದಿದೆ. ದುಷ್ಕರ್ಮಿಗಳು ರೌಡಿಶೀಟರ್ ಮೇಲೆ ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ಹತ್ಯೆ ಮಾಡಲು ಮುಂದಾಗಿದ್ದು, ಗಗನ್ ಶರ್ಮಾ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಗಗನ್ ಶರ್ಮಾ ಹೌಗ್ರೌಂಡ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದಾನೆ. ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್, ಅರುಣ್, ಕೃಷ್ಣ ಎಂಬುವರು ಈತನ ಹತ್ಯೆಗೆ ಸಂಚು ರೂಪಿಸಿದ್ದಾರೆ. ರೌಡಿಶೀಟರ್ ಗಗನ್ ಹಾಗೂ ಕೃತ್ಯ ಎಸಗಿರುವ ಹಂತಕರು ಸ್ನೇಹಿತರು. ಆಸ್ತಿ ವಿಚಾರದಲ್ಲಿ ಗಗನ್ ಮತ್ತು ಸುನೀಲ್ ನಡುವೆ ಮನಸ್ತಾಪ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಮಾಡಲು ಮುಂದಾಗಿದ್ದಾರೆ.