ಸಣ್ಣ ಕೈಗಾರಿಕೆ ಒಂದರಲ್ಲಿ ಬೆಂಕಿ ಅವಘಡ: ಸ್ಥಳಕ್ಕೆ ಅಗ್ನಿಶಾಮಕ ವಾಹನ ಹಾಗು ಸಿಬ್ಬಂದಿ ದೌಡು

ಸಣ್ಣ ಕೈಗಾರಿಕೆ ಒಂದರಲ್ಲಿ ಬೆಂಕಿ ಅವಘಡ: ಸ್ಥಳಕ್ಕೆ ಅಗ್ನಿಶಾಮಕ ವಾಹನ ಹಾಗು ಸಿಬ್ಬಂದಿ ದೌಡು

ಬೆಂಗಳೂರು: ಸಣ್ಣ ಕೈಗಾರಿಕೆ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮೈಸೂರು ರಸ್ತೆಯ ಹೊಸಗುಡ್ಡದ ಹಳ್ಳಿಯಲ್ಲಿ ನಡೆದಿದೆ. ಇನ್ನೂ ಬೆಂಕಿ ಹೊತ್ತು ಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಅನ್ವಯ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ಹಾಗು ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಕೈಗಾರಿಕೆಯ ಮೆಶಿನ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೂ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಬೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.